ADVERTISEMENT

ಸೂರಜ್‌ ರೇವಣ್ಣಗೆ ವೈದ್ಯಕೀಯ ಪರೀಕ್ಷೆ?

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 23:30 IST
Last Updated 25 ಜೂನ್ 2024, 23:30 IST
ಸೂರಜ್‌ ರೇವಣ್ಣ
ಸೂರಜ್‌ ರೇವಣ್ಣ    

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಸೂರಜ್‌ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಎಸ್ಐಟಿ ಸಿದ್ಧತೆ ನಡೆಸಿದೆ.

‘ಜುಲೈ 1ರ ತನಕ ಸೂರಜ್‌ ಅವರನ್ನು ಎಸ್‌ಐಟಿ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಬೌರಿಂಗ್‌ ಅಥವಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ನಂತರ, ಆರೋಪಿಯನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT