ADVERTISEMENT

ಮೆಗಾ ಉದ್ಯೋಗ ಮೇಳ ನಾಳೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 18:49 IST
Last Updated 18 ಅಕ್ಟೋಬರ್ 2024, 18:49 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕೆಎಲ್‌ಇ ಸೊಸೈಟಿ ಅಡಿಯಲ್ಲಿ ಬರುವ ರಾಜಾಜಿನಗರದ ಎಸ್‌. ನಿಜಲಿಂಗಪ್ಪ ಕಾಲೇಜಿನ ವಜ್ರಮಹೋತ್ಸವದ ಅಂಗವಾಗಿ ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳಿಗಾಗಿ ಅ.20ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನದ ರಾಷ್ಟ್ರೀಯ ಸಂಸ್ಥೆಯ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ವಿಭಾಗ, ರಾಷ್ಟ್ರೀಯ ವೃತ್ತಿ ಸೇವೆ– ಅಂಗವಿಕಲರ ಕೇಂದ್ರ, ರಾಜ್ಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಮೇಳದಲ್ಲಿ 60 ಕಂಪನಿಗಳು ಭಾಗವಹಿಸಲಿವೆ.

ADVERTISEMENT

ಅಂಗವಿಕಲ ಅಭ್ಯರ್ಥಿಗಳಿಗೂ ಹೆಸರು ನೋಂದಣಿಗೆ ಅವಕಾಶವಿದೆ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಎಂ.ಎಂ.ಕವಲಗಿಮಠ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

2,700 ಅಭ್ಯರ್ಥಿಗಳು ಆನ್‌ಲೈನ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆಯ್ಕೆಯಾದವರಿಗೆ ಅಂದೇ ನೇಮಕಾತಿಪತ್ರ ನೀಡಲಾಗುವುದು ಎಂದು ಸಂಸ್ಥೆಯ ಉಪ ನಿರ್ದೇಶಕ ದಿವಾಕರ್ ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.