ADVERTISEMENT

ನಾಳೆ ಮೆಟ್ರೊ ನೇರಳೆ ಮಾರ್ಗದಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 11:09 IST
Last Updated 28 ಸೆಪ್ಟೆಂಬರ್ 2023, 11:09 IST
ಮೆಟ್ರೊ ರೈಲು
ಮೆಟ್ರೊ ರೈಲು   

ಬೆಂಗಳೂರು: ಮೆಟ್ರೊ ನೇರಳೆ ಮಾರ್ಗದಲ್ಲಿ ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೊ ನಿಲ್ದಾಣದವರೆಗೆ ನಾಳೆ (ಸೆ.29) ಸುರಕ್ಷತಾ ಪರಿಶೀಲನೆ ಹಮ್ಮಿಕೊಳ್ಳಲಾಗಿದೆ. ಅಂದು ಕೃಷ್ಣರಾಜಪುರ–ಗರುಡಚಾರ್‌ ಪಾಳ್ಯ ಹಾಗೂ ಮೈಸೂರು ರಸ್ತೆ ನಿಲ್ದಾಣ–ಕೆಂಗೇರಿ ನಿಲ್ದಾಣಗಳ ನಡುವೆ ರೈಲು ಸೇವೆ ಸ್ಥಗಿತಗೊಳ್ಳಲಿದೆ.

ಮೆಟ್ರೊ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ಪರಿಶೀಲನೆ ನಡೆಸಲಿದ್ದಾರೆ. ಅದಕ್ಕಾಗಿ ಪೂರ್ಣದಿನ ರೈಲು ಸ್ಥಗಿತಗೊಳ್ಳಲಿದೆ. ಬೈಯಪ್ಪನಹಳ್ಳಿ–ಮೈಸೂರು ರಸ್ತೆವರೆಗೆ ಮತ್ತು ವೈಟ್‌ಫೀಲ್ಡ್‌–ಕೃಷ್ಣರಾಜಪುರ ನಡುವೆ ಎಂದಿನಂತೆ ಮೆಟ್ರೊ ರೈಲು ಸಂಚರಿಸಲಿವೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೇರಳೆ ಮಾರ್ಗದ ಇನ್ನೊಂದು ತುದಿಯಲ್ಲಿರುವ ಕೆಂಗೇರಿ–ಚಲ್ಲಘಟ್ಟ ಮಾರ್ಗಗಳ ಪರಿಶೀಲನೆ ಮಾಡಿ, ಸುರಕ್ಷತೆ ಬಗ್ಗೆ ಹಸಿರು ನಿಶಾನೆ ತೋರಿಸಿದ ಬಳಿಕ ಎರಡೂ ಕಡೆಗಳಲ್ಲಿ ರೈಲು ಸಂಚಾರಕ್ಕೆ ದಿನ ನಿಗದಿಯಾಗಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.