ಬೆಂಗಳೂರು: ಮೆಟ್ರೊ ಕಾಮಗಾರಿಗಾಗಿ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಮೈಕೊ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ರಸ್ತೆಯನ್ನು ಒಂದು ವರ್ಷ ಮುಚ್ಚಲು ನಿರ್ಧರಿಸಲಾಗಿದೆ.
‘ನಮ್ಮ ಮೆಟ್ರೊ’ ಲಕ್ಕಸಂದ್ರ ಸುರಂಗ ನಿಲ್ದಾಣದ ದಕ್ಷಿಣ ಭಾಗದಲ್ಲಿನ ಪ್ರವೇಶ ಕಾಮಗಾರಿ ನಡೆಯಲಿದೆ. ಹೀಗಾಗಿ ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೇರಿ ಸರ್ಕಲ್ ಕಡೆಯಿಂದ ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸುವ ವಾಹನಗಳು ಮೈಕೊ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಬೋಸ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಮುಂದಕ್ಕೆ ಹೋಗಬೇಕು.
ಆನೆಪಾಳ್ಯ ಜಂಕ್ಷನ್‌ನಿಂದ ಡೇರಿ ಸರ್ಕಲ್ ಕಡೆಗೆ ಚಲಿಸುವ ವಾಹನಗಳಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಡೇರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ತೆರಳುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಕಾಳೇನ ಅಗ್ರಹಾರದಿಂದ (ಗೊಟ್ಟಿಗೆರೆ) ನಾಗವಾರ ಸಂಪರ್ಕಿಸುವ ಗುಲಾಬಿ ಮಾರ್ಗವು ಅತಿ ಉದ್ದದ ಸುರಂಗ ಮಾರ್ಗವನ್ನು ಹೊಂದಿದೆ. ಒಟ್ಟು 21.26 ಕಿ.ಮೀ. ಮಾರ್ಗದಲ್ಲಿ 13.76 ಕಿ.ಮೀ. ಸುರಂಗ ಮಾರ್ಗವಾಗಿದ್ದು, ಕಾಮಗಾರಿಗಳು ನಡೆಯುತ್ತಿವೆ. 2025ರ ಅಂತ್ಯದೊಳಗೆ ಈ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಆರಂಭಿಸುವ ಗುರಿಯನ್ನು ಬಿಎಂಆರ್‌ಸಿಎಲ್ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.