ADVERTISEMENT

ಮೆಟ್ರೊ ಕಾಮಗಾರಿ: ಏ.23ಕ್ಕೆ MG ರೋಡ್‌-ಬೈಯಪ್ಪನಹಳ್ಳಿ ಸಂಚಾರ ತಾತ್ಕಾಲಿಕ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 14:26 IST
Last Updated 22 ಏಪ್ರಿಲ್ 2022, 14:26 IST
ಮೆಟ್ರೊ ರೈಲು
ಮೆಟ್ರೊ ರೈಲು   

ಬೆಂಗಳೂರು: ಮೆಟ್ರೊ ರೈಲು ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣಾ ಕಾಮಗಾರಿಯನ್ನು ಬಿಎಂಆರ್‌ಸಿಎಲ್ ಕೈಗೆತ್ತಿಕೊಂಡಿದ್ದು, ಶನಿವಾರ ರಾತ್ರಿ 9.30ರಿಂದ 11.30ರ ವರೆಗೆ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ತನಕ ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೊ ನಿಲ್ದಾಣಗಳ ನಡುವೆ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಬೈಯಪ್ಪನಹಳ್ಳಿಯಿಂದ ಅಂದು ಕೊನೆಯ ರೈಲು ರಾತ್ರಿ 8.30ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿ ತನಕ ಹೋಗುವ ಕೊನೆಯ ರೈಲು ಕೆಂಗೇರಿ ಮೆಟ್ರೊ ನಿಲ್ದಾಣದಿಂದಲೂ 8.30ಕ್ಕೆ ಹೊರಡಲಿದೆ.

ರಾತ್ರಿ 9.30ರ ನಂತರ ಕೆಂಗೇರಿಯಿಂದ ಎಂ.ಜಿ.ರಸ್ತೆ ತನಕ ಮಾತ್ರ ರೈಲುಗಳು ಸಂಚರಿಸಲಿವೆ. ಭಾನುವಾರ ಬೆಳಿಗ್ಗೆ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಳಿಗ್ಗೆ 7 ಗಂಟೆಯಿಂದ ವೇಳಾಪಟ್ಟಿಯಂತೆ ಎಲ್ಲ ಮಾರ್ಗದಲ್ಲೂ ರೈಲುಗಳ ಸಂಚಾರ ಪುನರ್ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.