ADVERTISEMENT

ದಾಸರಹಳ್ಳಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್. ಮುನಿರಾಜು ಚಾಲನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 16:39 IST
Last Updated 27 ನವೆಂಬರ್ 2023, 16:39 IST
ಮಲ್ಲಸಂದ್ರದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಎಸ್. ಮುನಿರಾಜು ಸೋಮವಾರ ಚಾಲನೆ ನೀಡಿದರು.
ಮಲ್ಲಸಂದ್ರದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಎಸ್. ಮುನಿರಾಜು ಸೋಮವಾರ ಚಾಲನೆ ನೀಡಿದರು.   

ಪೀಣ್ಯ ದಾಸರಹಳ್ಳಿ: ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮೂಲಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.

ಕೆರೆ ಗುಡ್ಡದಹಳ್ಳಿ ಸರ್ಕಾರಿ ಶಾಲೆಯ ಒಂದು ಮತ್ತು ಮಂಜುನಾಥನಗರದ ಸರ್ಕಾರಿ ಶಾಲೆಯ ಐದು ನೂತನ ಕೊಠಡಿಗಳ ನಿರ್ಮಾಣ ಹಾಗೂ ಮಲ್ಲಸಂದ್ರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ನನ್ನ ಅವಧಿಯಲ್ಲಿ 300ಕ್ಕೂ ಹೆಚ್ಚು ಶಾಲಾ ಕೊಠಡಿಗಳು, ಕಾಂಪೌಂಡ್, ಪೀಠೋಪಕರಣ, ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಮಂಜುನಾಥನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ 1,100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇಲ್ಲಿ ಕೊಠಡಿಗಳ ಕೊರತೆ ಇತ್ತು. ಆದ್ದರಿಂದ, ಐದು ನೂತನ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ಬಿಜೆಪಿ ಮುಖಂಡರಾದ ನವೀನ್, ರಘು ಸೂರ್ಯ, ಹೇಮಾಚಲರೆಡ್ಡಿ, ಎಂ. ಆನಂದ್, ಚಿಕ್ಕಲಕ್ಕಣ್ಣ, ಗಂಗರಾಜು, ಪಾಂಡುರಂಗ ರಾವ್, ಬಲರಾಮ್, ಹುಚ್ಚರಂಗಯ್ಯ, ಮುಖ್ಯ ಶಿಕ್ಷಕ ವೇಣುಗೋಪಾಲ್, ಎಸ್‌ಡಿಎಂಸಿ ಅಧ್ಯಕ್ಷೆ ಯಶೋಧ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.