ADVERTISEMENT

ಬೆಂಗಳೂರು: ಮೊಬೈಲ್‌ ಸುಲಿಗೆಕೋರನ ಬಂಧನ

​ಪ್ರಜಾವಾಣಿ ವಾರ್ತೆ
Published 22 ಮೇ 2024, 15:48 IST
Last Updated 22 ಮೇ 2024, 15:48 IST
   

ಬೆಂಗಳೂರು: ರಸ್ತೆಯಲ್ಲಿ ನಡೆದು ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸುಬ್ಬಣ್ಣಪಾಳ್ಯದ ಪಂಚಮುಖಿ ಟೆಂಪಲ್‌ ಬಳಿಯ ನಿವಾಸಿ ವಿ.ಸೂರ್ಯ(20) ಬಂಧಿತ ಆರೋಪಿ.

ಆರೋಪಿ ಮೆಡಿಕಲ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು. ಆರೋಪಿಯಿಂದ ಮೊಬೈಲ್‌ ಹಾಗೂ ಬೈಕ್‌ ಜಪ್ತಿ ಮಾಡಿಕೊಳ್ಳಲಾಗಿದೆ.

ADVERTISEMENT

‘ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿ ರಾಮಯ್ಯ ಲೇಔಟ್‌ನಲ್ಲಿ ಮೇ 12ರಂದು ಬಹದ್ದೂರ್‌ ಥಾಪಾ ಅವರು ನಡೆದು ತೆರಳುತ್ತಿದ್ದರು. ಆಗ ಇಬ್ಬರು ಅಪರಿಚಿತರು ಬೈಕ್‌ನಲ್ಲಿ ಬಂದು ಮೊಬೈಲ್‌ ಕಸಿದು ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದೆ’ ಎಂದು ಪೊಲೀಸರು ಹೇಳಿದರು.

‘ಪುಲಕೇಶಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿಯ ಕೃತ್ಯ ಎಸಗುತ್ತಿದ್ದ ಆರೋಪಿ ನವೀನ್‌ರಾಜ್ ಎಂಬಾತನನ್ನು ಇತ್ತೀಚೆಗೆ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಸಿ.ಸಿ.ಟಿ.ವಿ. ಕ್ಯಾಮೆರಾ ಪರಿಶೀಲಿಸಿದಾಗ ಆತನ ಸಹಚರನೇ ಸೂರ್ಯ ಎಂಬುದು ದೃಢಪಟ್ಟಿತ್ತು. ನಂತರ ಆರೋಪಿ ಸೂರ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಬೈಲ್‌ ಸುಲಿಗೆ ಮಾಡಿರುವುದು ಗೊತ್ತಾಗಿದೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.