ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಮಹಮ್ಮದ್ ನೌಶಾದ್ ಅಲಿಯಾಸ್ ಅನ್ಸಾರಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಮೊಬೈಲ್ ಅನ್ನು ಭದ್ರತಾ ಸಿಬ್ಬಂದಿ ಜಪ್ತಿ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
‘ಅಪರಾಧ ಪ್ರಕರಣದಲ್ಲಿ ಅನ್ಸಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ವಿಚಾರಣೆಗಾಗಿ ಫೆ. 20ರಂದು ಅನ್ಸಾರಿಯನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದ ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸರು, ವಾಪಸು ಜೈಲಿಗೆ ಕರೆತಂದಿದ್ದರು’ ಎಂದು ಪೊಲೀಸರು ಹೇಳಿದರು.
‘ಜೈಲಿನ ಪ್ರವೇಶ ದ್ವಾರದಲ್ಲಿ ಅನ್ಸಾರಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆತನ ಒಳ ಉಡುಪಿನಲ್ಲಿ ಮೊಬೈಲ್ ಹಾಗೂ ಅದರ ಬ್ಯಾಟರಿ ಪತ್ತೆಯಾಯಿತು. ಎರಡನ್ನೂ ಜಪ್ತಿ ಮಾಡಿರುವ ಸಿಬ್ಬಂದಿ, ಠಾಣೆಗೆ ದೂರು ನೀಡಿದ್ದಾರೆ. ಅದರನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.