ADVERTISEMENT

ಬೀದರ್‌ನಲ್ಲಿ 1,596 ಕೆ.ಜಿ ಗಾಂಜಾ ಜಪ್ತಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 16:32 IST
Last Updated 9 ಮಾರ್ಚ್ 2024, 16:32 IST
ಎನ್‌ಸಿಬಿ ಅಧಿಕಾರಿಗಳು ಜಪ್ತಿ ಮಾಡಿರುವ ಗಾಂಜಾ ಚೀಲಗಳು
ಎನ್‌ಸಿಬಿ ಅಧಿಕಾರಿಗಳು ಜಪ್ತಿ ಮಾಡಿರುವ ಗಾಂಜಾ ಚೀಲಗಳು   

ಬೆಂಗಳೂರು: ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಎನ್‌ಸಿಬಿ (ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬೀದರ್‌ನಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ವಿಶೇಷ ಕಾರ್ಯಾಚರಣೆ ನಡೆಸಿರುವ ಎನ್‌ಸಿಬಿ ಅಧಿಕಾರಿಗಳು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶ ನಡುವೆ ಗಾಂಜಾ ಸಾಗಣೆ ಮಾಡುತ್ತಿದ್ದ ಬಗ್ಗೆ ಇತ್ತೀಚೆಗೆ ಮಾಹಿತಿ ಲಭ್ಯವಾಗಿತ್ತು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಸೆರೆ ಹಿಡಿಯಲಾಗಿದೆ’ ಎಂದು ಎನ್‌ಸಿಬಿ ಬೆಂಗಳೂರು ವಲಯ ನಿರ್ದೇಶಕ ಎಸ್‌.ಕೆ. ಮಿಶ್ರಾ ತಿಳಿಸಿದರು.

ADVERTISEMENT

‘ಗಾಂಜಾವನ್ನು ಚೀಲಗಳಲ್ಲಿ ತುಂಬಿ ವಾಹನದಲ್ಲಿ ಕೊಂಡೊಯ್ಯಲಾಗುತ್ತಿತ್ತು. ಖಚಿತ ಮಾಹಿತಿ ಸಂಗ್ರಹಿಸಿ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಸಾಗಣೆಯಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.