ಬೆಂಗಳೂರು: ‘ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆ’ಯಡಿ ನವೆಂಬರ್ ಒಂದೇ ತಿಂಗಳಲ್ಲಿ 1.12 ಲಕ್ಷ ಮಂದಿ ವೈದ್ಯಕೀಯ ಸೌಲಭ್ಯ ಪಡೆದಿದ್ದಾರೆ’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈ ವರ್ಷ ಏಪ್ರಿಲ್‌ನಿಂದ ನವೆಂಬರ್ ತಿಂಗಳವರೆಗೆ 7.78 ಲಕ್ಷ ಮಂದಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಪಡೆದಿದ್ದಾರೆ. ಅವರಲ್ಲಿ 6 ಲಕ್ಷಕ್ಕೂ ಹೆಚ್ಚು ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಆಯ್ಕೆ ಮಾಡಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.