ಬೆಂಗಳೂರು: ‘ಪ್ರಸಕ್ತ ಸಾಲಿನಲ್ಲಿ ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, ಈವರೆಗೆ ₹2,483.91 ಕೋಟಿ ಸಂಗ್ರಹವಾಗಿದೆ. ಗುರಿ ತಲುಪಲು ಕಂದಾಯ ವಿಭಾಗದ ಅಧಿಕಾರಿಗಳ ಶ್ರಮ ವಹಿಸಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹ ಸಂಬಂಧ ಸಭೆ ನಡೆಸಿದ ಅವರು, ‘ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಿ ತೆರಿಗೆ ವಸೂಲಿಗೆ ಕ್ರಮ ವಹಿಸಬೇಕು. ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ಆಸ್ತಿಗಳನ್ನು ಪತ್ತೆ ಮಾಡಿ ತೆರಿಗೆ ವ್ಯಾಪ್ತಿಗೆ ತರಬೇಕು’ ಎಂದು ತಿಳಿಸಿದರು.
ಆಸ್ತಿ ಮಾಲೀಕರು ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಪಾಲಿಸದಿದ್ದರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತೆರಿಗೆ ನಿಗದಿಪಡಿಸಬೇಕು. ಸುಸ್ತಿದಾರರ ಪಟ್ಟಿ ಸಿದ್ಧಪಡಿಸಿ ಕಾನೂನು ಕ್ರಮ ಜರುಗಿಸಬೇಕು ಎಂದೂ ಸೂಚನೆ ನೀಡಿದರು. ವಿಶೇಷ ಆಯುಕ್ತ(ಕಂದಾಯ) ಆರ್.ಎಲ್. ದೀಪಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.