ಬೆಂಗಳೂರು: ನಗರ್ತಪೇಟೆಯಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಮುಖೇಶ್ ಅವರನ್ನು ಕರೆದೊಯ್ಯಲು ಮುಂದಾದ ಪೊಲೀಸರ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಅಂಗಡಿಗಳನ್ನು ಬಂದ್ ಮಾಡಿ ರ‍್ಯಾಲಿ ನಡೆಸಲಾಗುತ್ತಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಥಳಕ್ಕೆ ಬಂದು ಪ್ರತಿಭಟನಕಾರರಿಗೆ ಬೆಂಬಲ ಸೂಚಿಸಿದರು. ಸರ್ಕಾರದ ವೈಫಲ್ಯದಿಂದ ಈ ಘಟನೆ ನಡೆದಿದೆ. ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಶೋಭಾ ಕರಂದ್ಲಾಜೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಶಾಸಕ ಸುರೇಶ್ ಕುಮಾರ್ ಅವರು ಪೊಲೀಸ್ ಜೀಪು ತಡೆಯಲು ಮುಂದಾದ ವೇಳೆಯೂ ವಾಗ್ವಾದ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.