ADVERTISEMENT

ನಾಗಸಂದ್ರ–ಮಾದಾವರ ಮೆಟ್ರೊ: ಸದ್ಯದಲ್ಲೇ ಅಧಿಕೃತ ಉದ್ಘಾಟನೆ ಎಂದ ಡಿಕೆಶಿ

ಪ್ರಾಯೋಗಿಕ ಸಂಚಾರ ಪರಿಶೀಲಿಸಿದ ಡಿಸಿಎಂ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 14:07 IST
Last Updated 6 ನವೆಂಬರ್ 2024, 14:07 IST
<div class="paragraphs"><p>ಪ್ರಾಯೋಗಿಕ ಸಂಚಾರ ಪರಿಶೀಲಿಸಿದ ಡಿಸಿಎಂ</p></div>

ಪ್ರಾಯೋಗಿಕ ಸಂಚಾರ ಪರಿಶೀಲಿಸಿದ ಡಿಸಿಎಂ

   

ಬೆಂಗಳೂರು: ನಮ್ಮ ಮೆಟ್ರೊದ ಹಸಿರು ಮಾರ್ಗದ ವಿಸ್ತರಿತ ಮಾರ್ಗವಾದ ನಾಗಸಂದ್ರ–ಮಾದಾವರದಲ್ಲಿ ರೈಲುಗಳ ವಾಣಿಜ್ಯ ಸಂಚಾರಕ್ಕೆ ಕ್ಷಣಗಣನೆ ಶುರುವಾಗಿದೆ. ‘ಉದ್ಘಾಟನೆ’ ಎಂಬ ಯಾವುದೇ ಔಪಚಾರಿಕ ಕಾರ್ಯಕ್ರಮವಿಲ್ಲದೇ ಸಂಚಾರ ಆರಂಭವಾಗುತ್ತಿದೆ.

ನಾಳೆ ನವೆಂಬರ್ 6ರಂದು ಬೆಳಿಗ್ಗೆ 5ರಿಂದಲೇ ವಾಣಿಜ್ಯ ಸಂಚಾರ ಆರಂಭವಾಗಲಿದೆ. 10 ನಿಮಿಷಕ್ಕೊಂದು ರೈಲು ಸಂಚಾರ ಇರಲಿದೆ.

ADVERTISEMENT

ಇನ್ನು, ಇಂದು ನಾಗಸಂದ್ರ–ಮಾದಾವರ ಮಾರ್ಗದಲ್ಲಿ ಆರಂಭಗೊಂಡ ಪ್ರಾಯೋಗಿಕ ಸಂಚಾರವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪರಿಶೀಲಿಸಿದರು.

ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗವನ್ನು ಇಂದು ಪರಿಶೀಲನೆ ನಡೆಸಿದೆ. ನಾಗರಿಕರನ್ನು ಹೆಚ್ಚು ಕಾಯಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಈಗಲೇ ಹೊಸ ಮಾರ್ಗದ ಸೇವೆಯನ್ನು ಆರಂಭಿಸಲಾಗಿದ್ದು, ಸದ್ಯದಲ್ಲೇ ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇಡೀ ದೇಶದಲ್ಲೇ ಅತಿ ಹೆಚ್ಚು ಮೆಟ್ರೋ ಪ್ರಯಾಣಿಕರನ್ನು ಬೆಂಗಳೂರು ಹೊಂದಿದೆ. ವಿಸ್ತರಿತ 3.14 ಕಿ.ಮೀ ಸೇರಿ ಬೆಂಗಳೂರು ಮೆಟ್ರೋ 76.95 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಮೆಟ್ರೋ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ವರ್ಷಕ್ಕೆ ಇನ್ನೂ 30 ಕಿ.ಮೀ ಸೇರ್ಪಡೆಯಾಗಲಿದೆ ಎಂದು ಹೇಳಿದ್ದಾರೆ.

2026ಕ್ಕೆ ಬೆಂಗಳೂರು ಮೆಟ್ರೋದ ಒಟ್ಟು ವ್ಯಾಪ್ತಿ 175 ಕಿ.ಮೀ ಆಗಲಿದೆ ಎಂದು ಅವರು ಇದೇ ವೇಳೆ ಹೇಳಿದರು.

ಈ ವೇಳೆ ಸಂಸದರಾದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕರಾದ ಶ್ರೀ ಎಂ. ಶ್ರೀನಿವಾಸ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮಹೇಶ್ವರ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.