ADVERTISEMENT

ಕಾಮಗಾರಿ: ಮೆಟ್ರೊ ರೈಲು ಸೇವೆ ಸ್ಥಗಿತ

ಬೈಯಪ್ಪನಹಳ್ಳಿ–ಎಸ್‌ವಿ ರಸ್ತೆ, ಕೆ.ಆರ್‌.ಪುರ– ವೈಟ್‌ಫೀಲ್ಡ್‌ ನಿಲ್ದಾಣ

​ಪ್ರಜಾವಾಣಿ ವಾರ್ತೆ
Published 7 ಜುಲೈ 2023, 23:23 IST
Last Updated 7 ಜುಲೈ 2023, 23:23 IST
   

ಬೆಂಗಳೂರು: ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ–ಎಸ್‌ವಿ ರಸ್ತೆ ಹಾಗೂ ಕೃಷ್ಣರಾಜಪುರ–ವೈಟ್‌ಫೀಲ್ಡ್‌ (ಕಾಡುಗೋಡಿ) ನಿಲ್ದಾಣಗಳ ನಡುವೆ ಜುಲೈ 10ರಿಂದ ಆಗಸ್ಟ್‌ 9ರ ತನಕ ಬೆಳಿಗ್ಗೆ 5ರಿಂದ 7ರ ವರೆಗೆ ಮೆಟ್ರೊ ರೈಲುಗಳ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೊ ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸಲು ಸಿಗ್ನಲ್‌ ಹಾಗೂ ಇತರೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಕಾರಣ ರೈಲು ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸ್ವಾಮಿ ವಿವೇಕಾನಂದ ರಸ್ತೆ (ಬೈಯಪ್ಪನಹಳ್ಳಿ ನಿಲ್ದಾಣದ ಮೊದಲು ಒಂದು ನಿಲ್ದಾಣ) ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ರೈಲು ಸೇವೆಗಳು ಬೆಳಿಗ್ಗೆ 5ರಿಂದ 7 ಗಂಟೆವರೆಗೆ ಲಭ್ಯವಿರುತ್ತವೆ. ಬೆಳಿಗ್ಗೆ 7ರ ನಂತರ ಬೈಯಪ್ಪನಹಳ್ಳಿ –ಕೆಂಗೇರಿ ಹಾಗೂ ಕೆ.ಆರ್‌.ಪುರ–ವೈಟ್‌ಫೀಲ್ಡ್‌ ನಿಲ್ದಾಣಗಳ ನಡುವೆ ವಾಣಿಜ್ಯ ರೈಲುಗಳ ಸಂಚಾರವು ಎಂದಿನಂತೆ ರಾತ್ರಿ 11ರ ತನಕ ಇರಲಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.