ಬೆಂಗಳೂರು: ನಮ್ಮ ಯಾತ್ರಿ ಕಂಪನಿಯು ಆಟೊ ರಿಕ್ಷಾ ಹಾಗೂ ಕ್ಯಾಬ್ ಚಾಲಕರ 48 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಿದೆ.
ಚೆನ್ನೈನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 18 ವಿದ್ಯಾರ್ಥಿಗಳಿಗೆ ಹಾಗೂ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ 30 ವಿದ್ಯಾರ್ಥಿಗಳಿಗೆ ತಲಾ ₹ 15 ಸಾವಿರದಿಂದ ₹ 20 ಸಾವಿರದವರೆಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗಿದೆ.
‘ನಮ್ಮ ಯಾತ್ರಿ ರೈಸಿಂಗ್ ಸ್ಟಾರ್ಸ್’ ಹೆಸರಿನಲ್ಲಿ ಈ ಶಿಷ್ಯವೇತನ ಪ್ರಾರಂಭಿಸಲಾಗಿದೆ. ಕಂಪನಿಯಡಿ ನೋಂದಣಿಯಾಗಿರುವ ಬೆಂಗಳೂರು ಮತ್ತು ಚೆನ್ನೈನ ಚಾಲಕರ ಮಕ್ಕಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುತ್ತಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದಲ್ಲಿ ಅಧಿಕ ಅಂಕ ಪಡೆದವರಿಗೆ ಉನ್ನತ ಶಿಕ್ಷಣ ಪಡೆಯಲು ಬೆಂಬಲ ನೀಡಲಾಗುತ್ತದೆ’ ಎಂದು ಕಂಪನಿ ತಿಳಿಸಿದೆ.
‘ಪ್ರತಿ ವರ್ಷ 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಗುರಿ ಹೊಂದಲಾಗಿದೆ. ಬೆಂಗಳೂರಿನ ನಮ್ಮ ಯಾತ್ರಿ ಆಟೊ ರಿಕ್ಷಾ ಚಾಲಕ ಸಿದ್ದೇಗೌಡ ಅವರ ಪುತ್ರಿ ಭಾವನಾ ಅವರು ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದರು’ ಎಂದು ಕಂಪನಿ ಹೇಳಿದೆ.
‘ವಿದ್ಯಾರ್ಥಿ ವೇತನದ ಯೋಜನೆಯನ್ನು ಇನ್ನಷ್ಟು ನಗರಗಳಿಗೆ ವಿಸ್ತರಿಸುವ ಗುರಿ ಹಮ್ಮಿಕೊಳ್ಳಲಾಗಿದೆ’ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.