ಬೆಂಗಳೂರು: ಇನ್‌ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರನ್ನು ಗುರುವಾರ ಸದಾಶಿವನಗರದ ಬಿಡಿಎ ಕಚೇರಿಯಲ್ಲಿ ಭೇಟಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ‘ಮೈಸೂರಿನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನ ಅಭಿವೃದ್ಧಿ ಮಾಡುವ ಸಂಬಂಧ ನಾರಾಯಣಮೂರ್ತಿ ಅವರು ಭೇಟಿ ಮಾಡಿ ನನ್ನೊಂದಿಗೆ ಚರ್ಚಿಸಿದರು. ಇದೇ ಸಂಸ್ಥೆಯಲ್ಲಿ ಅವರು ಸಹ ಶಿಕ್ಷಣ ಪಡೆದಿದ್ದರು. ಹೀಗಾಗಿ ಈ ಸಂಸ್ಥೆಯನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಿದ್ದಾರೆ’ ಎಂದು ಹೇಳಿದರು.
ಬೆಂಗಳೂರಿನ ಅಭಿವೃದ್ಧಿ ಬಗ್ಗೆಯೂ ಕೆಲ ಸಲಹೆಗಳನ್ನು ನೀಡಿರುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.