ಬೆಂಗಳೂರು: ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಮಕ್ಕಳಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಲಗ್ಗೆರೆಯ ನಾರಾಯಣ ಇ–ಟೆಕ್ನೊ ಶಾಲೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
‘ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನೀಡಿರುವ ದೂರಿನ ಅನ್ವಯ ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
‘ಶುಲ್ಕದ ವಿಚಾರವಾಗಿ ಕೆಲ ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆಪೋಷಕರ ಮಕ್ಕಳನ್ನೇ ಗುರಿಯಾಗಿಸಿಕೊಂಡು ಶಿಕ್ಷೆ ನೀಡಲಾಗಿದೆ. ಶಾಲಾ ಕೊಠಡಿಯಲ್ಲಿ ಮಕ್ಕಳನ್ನು ಇಡೀ ದಿನ ನಿಲ್ಲಿಸಲಾಗಿದೆ. ಅವರ ಜೊತೆ ಸೇರದಂತೆ ಇತರ ವಿದ್ಯಾರ್ಥಿಗಳಿಗೆ ಶಿಕ್ಷಕರೇ ಸೂಚಿಸುತ್ತಿದ್ದಾರೆ. ಇದರಿಂದ ಮಕ್ಕಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.