ADVERTISEMENT

ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2024, 16:16 IST
Last Updated 9 ನವೆಂಬರ್ 2024, 16:16 IST
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ (ಪಿಆರ್‌ಸಿಐ) 18ನೇ ವಿಶ್ಚ ಸಂವಹನ ಸಮ್ಮೇಳನದಲ್ಲಿ ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ (ಪಿಆರ್‌ಸಿಐ) 18ನೇ ವಿಶ್ಚ ಸಂವಹನ ಸಮ್ಮೇಳನದಲ್ಲಿ ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.   

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (ಪಿಆರ್‌ಸಿಐ) ಆಯೋಜಿಸಿದ್ದ 18ನೇ ವಿಶ್ಚ ಸಂವಹನ ಸಮ್ಮೇಳನದಲ್ಲಿ ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೆಎಸ್‌ಆರ್‌ಟಿಸಿಯ ಕಾರ್ಮಿಕ ಸ್ನೇಹಿ, ಪ್ರಯಾಣಿಕ ಸ್ನೇಹಿ ಉಪಕ್ರಮಗಳನ್ನು ಹಾಗೂ ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕೇಂದ್ರ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊ ನಾಯ್ಕ್, 2024ನೇ ವರ್ಷದ ಮಿಸ್ ಗ್ಲೋಬಲ್ ಇಂಡಿಯಾ ಸ್ವೀಸೆಲ್ ಮರಿಯಾ ಪುಟಾರ್ಡೊ, ಪಿಆರ್‌ಸಿಐ ರಾಷ್ಟ್ರೀಯ ಅಧ್ಯಕ್ಷೆ ಗೀತಾ ಶಂಕರ್ ಅವರು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ADVERTISEMENT

ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಎಚ್.ಟಿ, ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಮಲಿಂಗಯ್ಯ ಬಿ.ಹೊಸಪೂಜಾರಿ ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.