ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್‌ಆರ್) ಫೆ.22ರಿಂದ 25ರವರೆಗೆ ನಡೆಯುವ ರಾಷ್ಟ್ರೀಯ ತೋಟಗಾರಿಕೆ ಮೇಳವನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಉದ್ಘಾಟನೆ ಮಾಡಲಿದ್ದಾರೆ.
ಈ ಮೇಳವನ್ನು ‘ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ’ ಎಂಬ ವಿಷಯದಡಿ ಆಯೋಜಿಸಲಾಗಿದೆ. 120ಕ್ಕೂ ಹೆಚ್ಚು ಬೆಳೆಗಳ ಪ್ರಾತ್ಯಕ್ಷಿಕೆ ಮತ್ತು 58 ಹೊಸ ತಂತ್ರಜ್ಞಾನಗಳ ಪರಿಚಯ ಮಾಡಲಾಗುತ್ತದೆ. ಮೌಲ್ಯವರ್ಧಿತ ಸಿರಿಧಾನ್ಯಗಳ ಉತ್ಪನ್ನಗಳು, ಅಣಬೆ ಬೇಸಾಯ ಮತ್ತು ಮೌಲ್ಯವರ್ಧನೆ, ಜೈವಿಕ್ ತ್ಯಾಜ್ಯದಿಂದ ಗೊಬ್ಬರ ತಯಾರಿಕೆ ಇತ್ಯಾದಿ ವಿಷಯಗಳ ಬಗ್ಗೆ ಕಾರ್ಯಾಗಾರಗಳು ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.