ADVERTISEMENT

‘ಧರ್ಮವಿಲ್ಲದ ವಿಜ್ಞಾನ ಕುರುಡು’–ಪ್ರೊ.ಕೆ.ಎಸ್‌.ರಂಗಪ್ಪ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 22:55 IST
Last Updated 14 ಮಾರ್ಚ್ 2021, 22:55 IST
ಕೆ.ಎಸ್‌.ರಂಗಪ್ಪ ಅವರನ್ನು ಸನ್ಮಾನಿಸಲಾಯಿತು.
ಕೆ.ಎಸ್‌.ರಂಗಪ್ಪ ಅವರನ್ನು ಸನ್ಮಾನಿಸಲಾಯಿತು.   

ಬೆಂಗಳೂರು: ‘ಧರ್ಮವಿಲ್ಲದ ವಿಜ್ಞಾನ ಕುರುಡು. ವಿಜ್ಞಾನವಿಲ್ಲದ ಧರ್ಮ ಕುಂಟು’ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಹೇಳಿದರು.

ಆಕ್ಸ್‌ಫರ್ಡ್‌ ವಿಜ್ಞಾನ ಕಾಲೇಜು, ಐಎಸ್‌ಸಿಎ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಭವಿಷ್ಯದ ವಿಜ್ಞಾನ ತಂತ್ರಜ್ಞಾನ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿಜ್ಞಾನವಿಲ್ಲದೆ ಮಾನವನ ಬೆಳವಣಿಗೆ ಸಾಧ್ಯವಿಲ್ಲ. ತಾಂತ್ರಿಕ ಪ್ರಗತಿಯೂ ಆಗುವುದಿಲ್ಲ. ಒಟ್ಟಾರೆ ಜಗತ್ತು ಸ್ತಬ್ಧಗೊಳ್ಳುತ್ತದೆ’ ಎಂದರು.

ADVERTISEMENT

ಐಎಸ್‌ಸಿಎ ಸಮನ್ವಯಕಾರ ಗಂಗಾಧರ್‌ ‘ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕು. ಅದನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಇದಕ್ಕಾಗಿ ಸಾಧ್ಯವಾದಷ್ಟು ಹೆಚ್ಚು ವಿಚಾರ ಸಂಕಿರಣಗಳನ್ನು ಆಯೋಜಿಸಬೇಕು’ ಎಂದರು.

ದಿ ಆಕ್ಸ್‌ಫರ್ಡ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎಸ್‌.ಎನ್‌.ವಿ.ಎಲ್‌.ನರಸಿಂಹರಾಜು, ಆಕ್ಸ್‌ಫರ್ಡ್‌ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆರ್‌.ಕಾವ್ಯಶ್ರೀ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.