ADVERTISEMENT

ನೇಹಾ ಹತ್ಯೆಗೆ ಕೋಮು ಬಣ್ಣ ಬೇಡ: ಎಸ್‌ಯುಸಿಐ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 15:55 IST
Last Updated 21 ಏಪ್ರಿಲ್ 2024, 15:55 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯು ಹೇಯ ಘಟನೆಯಾಗಿದ್ದು, ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು. ಆದರೆ, ಈ ಘಟನೆಗೆ ಅನವಶ್ಯಕವಾಗಿ ಕೋಮು ಬಣ್ಣ ಬಳಿಯಬಾರದು ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ತಿಳಿಸಿದೆ.

ರಾಜ್ಯದಲ್ಲಿ ಭಿನ್ನಮತ ಮತ್ತು ನಾಯಕತ್ವದ ಬಿಕ್ಕಟ್ಟಿನಲ್ಲಿರುವ ಬಿಜೆಪಿ ಪಕ್ಷಕ್ಕೆ ಜನರ ಮುಂದೆ ಪರಿಣಾಮಕಾರಿಯಾಗಿ ಹೇಳಿಕೊಳ್ಳುವ ವಿಷಯವೇನೂ ಇಲ್ಲದೆ ಸುಮ್ಮನಾಗಿತ್ತು. ಇಂತಹ ಸಂದರ್ಭದಲ್ಲಿ ನಡೆದ ಈ ದುರ್ಘಟನೆಯನ್ನು ಬಿಜೆಪಿಯು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಇದನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿ, ಈ ವಿವಾದ ಕೋಮು ದಳ್ಳುರಿಗೆ ದಾರಿ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ. ಉಮಾ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.