ADVERTISEMENT

ಬೆಂಗಳೂರು | ಹೊಸ ಕಾನೂನು: ಮೊದಲ ದಿನ 39 ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:37 IST
Last Updated 2 ಜುಲೈ 2024, 16:37 IST
ಬಿ.ದಯಾನಂದ 
ಬಿ.ದಯಾನಂದ    

ಬೆಂಗಳೂರು: ಕ್ರಿಮಿನಲ್ ಅಪರಾಧಕ್ಕೆ ಸಂಬಂಧಿಸಿದಂತೆ ಹೊಸದಾಗಿ ಜಾರಿಯಾದ ಮೂರು ಕಾಯ್ದೆಗಳ ಅಡಿಯಲ್ಲಿ ಮೊದಲನೇ ದಿನ (ಜುಲೈ 1ರಂದು) ಬೆಂಗಳೂರು ನಗರದಲ್ಲಿ ಒಟ್ಟು 39 ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಕಮಿಷನರ್‌ ಬಿ.ದಯಾನಂದ ತಿಳಿಸಿದರು.

ನೂತನ ಕಾನೂನಿನ ಅನ್ವಯವೇ ನಗರದಲ್ಲಿ ಮೊದಲನೇ ದಿನ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಯಾವುದೇ ಸಮಸ್ಯೆ ಆಗಿಲ್ಲ. ತಾಂತ್ರಿಕ ಸಮಸ್ಯೆಗಳೂ ಕಾಣಿಸಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಭಾರತೀಯ ನ್ಯಾಯ ಸಂಹಿತೆ‌ (ಬಿಎನ್‌ಎಸ್‌) ಅಡಿ 32, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿ 7 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ADVERTISEMENT

ಮೂರು ಕಾಯ್ದೆಗಳ ಕುರಿತು ನಗರದ ವ್ಯಾಪ್ತಿಯ ಎಲ್ಲ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.