ADVERTISEMENT

ಹೊಸ ಕ್ರಿಮಿನಲ್‌ ಅಪರಾಧ ಕಾನೂನು: ರಾಜ್ಯದಲ್ಲಿ ಮೊದಲ ದಿನ 63 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 16:01 IST
Last Updated 1 ಜುಲೈ 2024, 16:01 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸೋಮವಾರದಿಂದ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್‌ ಅಪರಾಧ ಕಾನೂನುಗಳ ಅಡಿಯಲ್ಲಿ ಮೊದಲ ದಿನವೇ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 63 ಪ್ರಕರಣಗಳು ದಾಖಲಾಗಿವೆ.

ಸೋಮವಾರ ರಾತ್ರಿ 8 ಗಂಟೆವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನು ಪೊಲೀಸ್‌ ಇಲಾಖೆ ನೀಡಿದೆ.

ADVERTISEMENT

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲಾಗಿದೆ. ಸೋಮವಾರ ನಸುಕಿನ 1.30ರ ಸುಮಾರಿಗೆ ಯುಡಿಆರ್‌ ಪ್ರಕರಣ ದಾಖಲು ಮಾಡಿಕೊಳ್ಳಲಾಯಿತು ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.