ADVERTISEMENT

ಹೊಸ ಮರಳು ನೀತಿ ಜಾರಿ

​ಪ್ರಜಾವಾಣಿ ವಾರ್ತೆ
Published 22 ಮೇ 2020, 21:26 IST
Last Updated 22 ಮೇ 2020, 21:26 IST

ಬೆಂಗಳೂರು: ನದಿ ಪಾತ್ರಗಳಲ್ಲಿ, ಜಲಾಶಯಗಳ ಹಿನ್ನೀರು ಪ್ರದೇಶ, ಪಟ್ಟಾ ಭೂಮಿ, ಕೆರೆ, ಗ್ರಾಮೀಣ ಪ್ರದೇಶದ ಹಳ್ಳ ಕೊಳ್ಳಗಳಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡುವಹೊಸ ಮರಳು ನೀತಿ ಜಾರಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಮರಳು ಪ್ರತಿ ಮೆಟ್ರಿಕ್‌ ಟನ್‌ಗೆ ₹ 700 ರಂತೆ ನಿಗದಿ ಮಾಡಲಾಗುವುದು. ಜಿಲ್ಲಾ ದಂಡಾಧಿಕಾರಿಗಳು ಮತ್ತು ಎಇಇಗಳ ಸಮನ್ವಯದ ಮೂಲಕ ಕಾರ್ಯ ನಿರ್ವಹಿಸುತ್ತಾರೆ. ಇದರಿಂದ ಅಕ್ರಮ ಮರಳು ದಂಧೆಗೆ ಕಡಿವಾಣ ಬೀಳಲಿದೆ. ಹೊಸ ನೀತಿಯಿಂದ ಸರ್ಕಾರಕ್ಕೆ ಸುಮಾರು ₹200 ಕೋಟಿ ರಾಜಸ್ವ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT