ADVERTISEMENT

ನೈಜೀರಿಯಾದ ಡ್ರಗ್‌ ಪೆಡ್ಲರ್ ಬಂಧನ: ₹1.50 ಕೋಟಿ ಸ್ವತ್ತು ವಶ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 15:48 IST
Last Updated 25 ಅಕ್ಟೋಬರ್ 2024, 15:48 IST
ಯುಜೋವುಂ ಚಿಕ್ಡ್ವುಂ ಲಿವೋನಸ್
ಯುಜೋವುಂ ಚಿಕ್ಡ್ವುಂ ಲಿವೋನಸ್   

ಬೆಂಗಳೂರು: ಸಿಸಿಬಿಯ ಮಾದಕ ದ್ರವ್ಯ ನಿಗ್ರಹ‌ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮತ್ತು ಸಾಗಣೆಯಲ್ಲಿ ತೊಡಗಿದ್ದ ನೈಜೀರಿಯಾ ಡ್ರಗ್‌ ಪೆಡ್ಲರ್‌ನನ್ನು ಬಂಧಿಸಿ, ₹ 1.50 ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್ ವಶಕ್ಕೆ ಪಡೆದಿದ್ದಾರೆ.

‘ನೈಜೀರಿಯಾದ ಯುಜೋವುಂ ಚಿಕ್ಡ್ವುಂ ಲಿವೋನಸ್ (32) ಎಂಬಾತ ಲಕ್ಕಸಂದ್ರ ಬಳಿ ರಸ್ತೆ ಪಕ್ಕದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಎಂಡಿಎಂಎ ಕ್ರಿಸ್ಟಲ್ಸ್ ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು, ಆತನನ್ನು ವಶಕ್ಕೆ ಪಡೆದು, 1 ಕೆ.ಜಿ. 3 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್‌, ತೂಕದ ಯಂತ್ರ, ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2018ರಲ್ಲಿ ಮುಂಬೈನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿ, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

ADVERTISEMENT

‘ದೇಶದ ವಿವಿಧ ರಾಜ್ಯ ಹಾಗೂ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸಿಕೊಂಡು ಪರಿಚಿತ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ. ಇದನ್ನು ಖರೀದಿಸಿದವರು 50 ಗ್ರಾಂ ಪ್ಯಾಕೆಟ್‌ನಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ವಿಚಾರಣೆ ವೇಳೆ ಆರೋಪಿ ಹಲವು ಮಾಹಿತಿ ನೀಡಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.