ADVERTISEMENT

ಅ.15ಕ್ಕೆ ಮಾನಸಿಕ ಆರೋಗ್ಯ ಸಂತೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2024, 15:32 IST
Last Updated 13 ಅಕ್ಟೋಬರ್ 2024, 15:32 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಆತ್ಮಹತ್ಯೆ ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) ಇದೇ 15ಕ್ಕೆ ಮಾನಸಿಕ ಆರೋಗ್ಯ ಸಂತೆ ಹಮ್ಮಿಕೊಂಡಿದೆ. 

ಮೂರನೇ ಆವೃತ್ತಿಯ ಈ ಸಂತೆಯು, ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವಿವಿಧ ಸರ್ಕಾರಿ ಹಾಗೂ ಖಾಸಗಿ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಸಂತೆಯನ್ನು ಹಮ್ಮಿಕೊಳ್ಳಲಾಗಿದ್ದು, 4,000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. 60ಕ್ಕೂ ಅಧಿಕ ಮಳಿಗೆಗಳು ಈ ಸಂತೆಯಲ್ಲಿ ಇರಲಿವೆ ಎಂದು ಸಂಸ್ಥೆ ತಿಳಿಸಿದೆ.

ADVERTISEMENT

ಮೊದಲೆರಡು ಮಾನಸಿಕ ಆರೋಗ್ಯ ಸಂತೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೂರನೇ ಆವೃತ್ತಿಯ ಸಂತೆಯಲ್ಲಿ ಹಲವು ವೈಶಿಷ್ಟ್ಯತೆ ಇರಲಿದೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಗೊಂದಲಗಳ ಬಗ್ಗೆ ತಜ್ಞರ ಜತೆಗೆ ಚರ್ಚಿಸಲು, ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳ ಬಗ್ಗೆ ತಿಳಿಯಲು ಈ ಸಂತೆ ಸಹಕಾರಿಯಾಗಲಿದೆ ಎಂದು ಹೇಳಿದೆ. 

ನಿಜವಾದ ಮಿದುಳನ್ನು ಸಂತೆಯಲ್ಲಿ ವೀಕ್ಷಿಸಬಹುದಾಗಿದೆ. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಹಾಯವಾಣಿ ಸೇರಿ ವಿವಿಧ ಮಾಹಿತಿಗಳು ಲಭ್ಯವಾಗಲಿವೆ. ಈ ಸಂತೆಗೆ ಪ್ರವೇಶ ಉಚಿತ ಇರಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.