ADVERTISEMENT

ಕಳಪೆ ಕಾಮಗಾರಿಗೆ ಬಿಲ್ ಪಾವತಿ ಇಲ್ಲ: ಶಾಸಕ ಮುನಿರಾಜು

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 18:50 IST
Last Updated 10 ಜನವರಿ 2024, 18:50 IST
ಚಿಕ್ಕಬಾಣಾವರದ ರಾಘವೇಂದ್ರ ಬಡಾವಣೆಯಲ್ಲಿ ₹ 1.50 ಕೋಟಿ ವೆಚ್ಚದ ಡಾಂಬರು ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್. ಮುನಿರಾಜು ಶಂಕುಸ್ಥಾಪನೆ ನೆರವೇರಿಸಿದರು.
ಚಿಕ್ಕಬಾಣಾವರದ ರಾಘವೇಂದ್ರ ಬಡಾವಣೆಯಲ್ಲಿ ₹ 1.50 ಕೋಟಿ ವೆಚ್ಚದ ಡಾಂಬರು ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್. ಮುನಿರಾಜು ಶಂಕುಸ್ಥಾಪನೆ ನೆರವೇರಿಸಿದರು.   

ಪೀಣ್ಯ ದಾಸರಹಳ್ಳಿ: ‘ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಇಲ್ಲದೇ ಇದ್ದರೆ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡುವುದಿಲ್ಲ’ ಎಂದು ಶಾಸಕ ಎಸ್. ಮುನಿರಾಜು ಎಚ್ಚರಿಕೆ ನೀಡಿದರು.

ಚಿಕ್ಕಬಾಣಾವರದ ರಾಘವೇಂದ್ರ ಬಡಾವಣೆಯಲ್ಲಿ ಪಿಡಬ್ಲ್ಯುಡಿಯಿಂದ ₹ 1.50 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಲಾಭದ ದೃಷ್ಟಿಯಿಂದ ಕಳಪೆ ಕಾಮಗಾರಿ ಮಾಡಿದರೆ ಯಾವುದೇ ಕಾರಣಕ್ಕೂ ಬಿಲ್ ಮಂಜೂರು ಮಾಡುವುದಿಲ್ಲ’ ಎಂದು ತಿಳಿಸಿದರು.

ADVERTISEMENT

ಎಂಜಿನಿಯರ್ ಮೋಹನ್ ಮಾತನಾಡಿ, ‘ಮುಂದಿನ ವಾರದಿಂದ ಕೆಲಸ ಪ್ರಾರಂಭಿಸಲಾಗುತ್ತದೆ. ಗುಣಮಟ್ಟವನ್ನು ಪರಿಶೀಲಿಸಿ ಅಚ್ಚುಕಟ್ಟಾಗಿ ರಸ್ತೆ ಚರಂಡಿ ಅಭಿವೃದ್ಧಿ ಮಾಡಿಸಲಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಮುಖಂಡರಾದ ಬಿ.ಎಂ. ಚಿಕ್ಕಣ್ಣ, ಭಾಗ್ಯಮ್ಮ, ಎಂ.ಎಚ್. ಪಾಟೀಲ್, ನವೀನ್ ಕುಮಾರ್, ನಾರಾಯಣಸ್ವಾಮಿ, ಪುರಸಭೆ ಮುಖ್ಯ ಅಧಿಕಾರಿ ಎಚ್.ಎ. ಕುಮಾರ್, ಎಂಜಿನಿಯರ್ ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.