ಹೆಸರಘಟ್ಟ: ‘ನೀಲಗಿರಿ, ಅಕೇಶಿಯಾ ಮರಗಳನ್ನು ಬೆಳೆಸುವುದನ್ನು ಸರ್ಕಾರ ನಿಷೇಧ ಮಾಡಿದೆ. ಮುಂದಿನ ದಿನಗಳಲ್ಲಿ ಈ ಮರಗಳನ್ನು ಬೆಳೆದ ಕೃಷಿಕರಿಗೆ ಸರ್ಕಾರದ ಯಾವ ಸೌಲಭ್ಯಗಳು ಸಿಗುವುದಿಲ್ಲ’ ಎಂದು ಯಲಹಂಕ ಶಾಸಕ ಎಸ್.ಅರ್.ವಿಶ್ವನಾಥ್ ತಿಳಿಸಿದರು.
ತೋಟಗಾರಿಕೆ ಮಹಾವಿದ್ಯಾಲಯ ಚಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮೀಣ ತೋಟಗಾರಿಕೆ ಕಾರ್ಯಾ
ನುಭವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
‘ಈ ಮರಗಳು ಕೃಷಿ ಭೂಮಿಯ ಫಲವತ್ತತೆ ಹಾಳುಗೆಡವುತ್ತಿದೆ. ಆದ್ದರಿಂದ ಈ ಮರಗಳನ್ನು ಬೆಳೆಯುವ ರೈತರಿಗೆ ಸರ್ಕಾರದ ಸಬ್ಸಿಡಿ, ಬೆಳೆ ವಿಮೆಗಳ ಸೌಲಭ್ಯವನ್ನು ನೀಡುವುದಿಲ್ಲ. ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುತ್ತೇವೆ’ ಎಂದರು.
ಸೊಣೇನಹಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್ ಮಾತನಾಡಿ, ‘ಗ್ರಾಮದ ಯುವಕರೇ ಇಲ್ಲೊಂದು ಕೆರೆ ಕಟ್ಟಿದ್ದಾರೆ. ಕೆರೆ ಅಭಿವೃದ್ದಿಗೆ ₹20 ಲಕ್ಷ ಅನುದಾನ ನೀಡ
ಲಾಗಿದೆ. ಸುರಿದ ಮಳೆಯಿಂದ ಕೆರೆಯಲ್ಲಿ ನೀರು ನಿಂತಿದ್ದು, ರೈತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಕೆರೆ ಸುತ್ತ ಬೇಲಿ ನಿರ್ಮಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.