ADVERTISEMENT

ನಾಲ್ಕು ತಿಂಗಳಿಂದ ಏನೂ ಕೆಲಸ ಆಗಿಲ್ಲ: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 20:48 IST
Last Updated 4 ಜುಲೈ 2024, 20:48 IST
   

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ನಾಲ್ಕೈದು ತಿಂಗಳಿಂದ ಯಾವ ಕೆಲಸವೂ ಆಗುತ್ತಿಲ್ಲ. ಕಾಮಗಾರಿಗಳಿಗೆ ವೇಗ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸ್ಕೈಡೆಕ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಈ ಯೋಜನೆಗಳೆಲ್ಲವನ್ನೂ ಮುಖ್ಯಮಂತ್ರಿಯವರಿಗೆ ವಿವರಿಸಬೇಕಾಗಿದೆ. ಮುಖ್ಯಮಂತ್ರಿಯವರೊಂದಿಗೆ ಮುಂದಿನ ವಾರ ಸಭೆ ನಡೆಸಿ ಎಲ್ಲವನ್ನೂ ಚರ್ಚಿಸಲಾಗು
ತ್ತದೆ ಎಂದು ಹೇಳಿದರು.

ADVERTISEMENT

‘ಗ್ರೇಟರ್‌ ಬೆಂಗಳೂರು ಅಥವಾ ಬಿಬಿಎಂಪಿಯನ್ನು ವಿಭಜಿಸುವ ಬಗ್ಗೆ ಯಾವ ಆಲೋಚನೆಯೂ ಇಲ್ಲ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ಅವೆಲ್ಲವೂ ಇರುವ ಕಡೆಯಲ್ಲೇ ಇರುತ್ತವೆ. ಅವುಗ
ಳನ್ನೇಕೆ ಬೆಂಗಳೂರಿಗೆ ಸೇರಿಸೋಣ’ ಎಂದು ಮರು ಪ್ರಶ್ನಿಸಿದರು.

ಬಿಬಿಎಂಪಿ ಆಡಳಿತಾಧಿಕಾರಿ ಎಸ್‌.ಆರ್‌. ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.