ADVERTISEMENT

ಲೋಕಸಭೆ: ತುಮಕೂರು, ಹಾವೇರಿಯಲ್ಲಿ ನೊಳಂಬರಿಗೆ ಟಿಕೆಟ್‌ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2024, 14:24 IST
Last Updated 12 ಮಾರ್ಚ್ 2024, 14:24 IST
<div class="paragraphs"><p>ಜಿ.ಎಸ್‌. ಬಸವರಾಜ್‌</p></div>

ಜಿ.ಎಸ್‌. ಬಸವರಾಜ್‌

   

ಬೆಂಗಳೂರು: ತುಮಕೂರು ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ನೊಳಂಬ ಲಿಂಗಾಯತ ಸಮುದಾಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವಂತೆ ನೊಳಂಬ ಲಿಂಗಾಯತ ಸಂಘವು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಒತ್ತಾಯಿಸಿದೆ.

ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಎಸ್‌.ಆರ್‌. ಪಾಟೀಲ, ‘ಕರ್ನಾಟಕದಲ್ಲಿ ವೀರಶೈವ– ಲಿಂಗಾಯತ ಸಮುದಾಯದ ಹತ್ತು ಸಂಸದರಿದ್ದಾರೆ. ತುಮಕೂರು ಕ್ಷೇತ್ರವನ್ನು ನೊಳಂಬ ಲಿಂಗಾಯತ ಸಮುದಾಯದ ಜಿ.ಎಸ್‌. ಬಸವರಾಜ್‌ ಪ್ರತಿನಿಧಿಸುತ್ತಿದ್ದಾರೆ. ಅವರು ಸ್ಪರ್ಧಿಸದೇ ಇದ್ದರೆ ನೊಳಂಬ ಸಮುದಾಯವರನ್ನೇ ಬಿಜೆಪಿಯಿಂದ ಕಣಕ್ಕಿಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ನೊಳಂಬ ಲಿಂಗಾಯತ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆ ಕ್ಷೇತ್ರದಲ್ಲೂ ತಮ್ಮ ಸಮುದಾಯದವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.