ಬೆಂಗಳೂರು: ಉತ್ತರ ಕರ್ನಾಟಕ ನಾಗರಿಕರ ಅಭಿವೃದ್ಧಿ ಸಂಘವು ಯಲಹಂಕ ಉಪನಗರದಲ್ಲಿರುವ ತನ್ನ ನಿವೇಶನದಲ್ಲಿ ಇದೇ ಭಾನುವಾರ ಬೆಳಿಗ್ಗೆ 11 ಗಂಟೆಗೆ ‘ರೊಟ್ಟಿ ಪಂಚಮಿ’ ಕಾರ್ಯಕ್ರಮ ಹಮ್ಮಿಕೊಂಡಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಜಿ. ಅವಟಿ, ‘ಸಂಸದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಅವರಿಂದ ಹಾಸ್ಯ ಕಾರ್ಯಕ್ರಮ, ಜೀವನ್ ಸಾಬ್ ತಂಡದಿಂದ ಜಾನಪದ ಗೀತೆಗಳ ಗಾಯನ ನಡೆಯಲಿದೆ. ಭರತನಾಟ್ಯ, ಭಾವಗೀತೆಗಳ ಗಾಯನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕ ಶೈಲಿಯ ರೊಟ್ಟಿ ಊಟದ ವ್ಯವಸ್ಥೆಯನ್ನೂ ಮಾಡಲಾಗುತ್ತದೆ’ ಎಂದು ಹೇಳಿದರು.
‘ನಮ್ಮ ಸಂಸ್ಕೃತಿ, ಪರಂಪರೆ, ಉಡುಗೆ ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಪ್ರೋತ್ಸಾಹಿಸುವುದು ನಮ್ಮ ಜವಾಬ್ದಾರಿ. ಇದೇ ಉದ್ದೇಶದಿಂದ ರಾಜಧಾನಿಯಲ್ಲಿ ಉತ್ತರ ಕರ್ನಾಟಕ ಉತ್ಸವ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.