ADVERTISEMENT

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 16:19 IST
Last Updated 28 ಆಗಸ್ಟ್ 2024, 16:19 IST
ಕವಿತಾ ರೆಡ್ಡಿ
ಕವಿತಾ ರೆಡ್ಡಿ   

ಬೆಂಗಳೂರು: ಪಕ್ಷದ ನಿರ್ಣಯಗಳ ಮತ್ತು ಆಯ್ಕೆಯ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ಅವರಿಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಕಾರಣ ಕೇಳಿ ಬುಧವಾರ ನೋಟಿಸ್‌ ನೀಡಿದೆ.

‘ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಈ ಹಿಂದೆಯೂ ನಿಮಗೆ ನೋಟಿಸ್ ನೀಡಲಾಗಿತ್ತು. ಅಲ್ಲದೆ, ಇನ್ನು ಮುಂದೆ ಈ ರೀತಿ ಹೇಳಿಕೆಗಳನ್ನು ನೀಡಬಾರದೆಂದು ಮೌಖಿಕವಾಗಿ ಸಲಹೆ ನೀಡಲಾಗಿತ್ತು. ಆದರೂ, ಪಕ್ಷಕ್ಕೆ ಮುಜುಗರ ಆಗುವಂಥ ಹೇಳಿಕೆಗಳನ್ನು ನೀಡುವುದನ್ನು ಮತ್ತು ಬರಹಗಳನ್ನು ಬರೆಯುವುದನ್ನು ಮುಂದುವರಿಸಿದ್ದೀರಿ. ಈ ಕಾರಣಕ್ಕೆ ತಮ್ಮನ್ನು ಪಕ್ಷದಿಂದ ಯಾಕೆ ಉಚ್ಚಾಟನೆ ಮಾಡಬಾರದು’ ಎಂದು ನೋಟಿಸ್‌ ನೀಡಿರುವ ಕೆ. ರೆಹಮಾನ್ ಖಾನ್ ನೇತೃತ್ವದ ಸಮಿತಿ, ಏಳು ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.

ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾ ರೆಡ್ಡಿ ಆಯ್ಕೆಯನ್ನು ಕವಿತಾ ರೆಡ್ಡಿ ಪ್ರಶ್ನಿಸಿದ್ದರು. ಅಲ್ಲದೆ, ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಹಂಚಿಕೆಯೂ ಸೇರಿದಂತೆ ಪಕ್ಷದ ಕೆಲವು ಆಂತರಿಕ ವಿಚಾರಗಳ ಬಗ್ಗೆಯೂ ಸಾಮಾಜಿಕ ಜಾಲ ತಾಣಗಳಲ್ಲಿ ಬರೆದುಕೊಂಡಿದ್ದರು. ಈ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.