ಬೆಂಗಳೂರು: ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ವಿದ್ಯಾರ್ಥಿಗಳು 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ಅನುಮತಿ ಹೈಕೋರ್ಟ್ ಅನುಮತಿ ನೀಡಿದೆ.
ಈ ಕುರಿತಂತೆ ಪ್ರತೀಕ್ ನರೇಂದ್ರ ಕಾಮತ್ ಸೇರಿದಂತೆ 9 ವಿದ್ಯಾರ್ಥಿಗಳು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಭಾರತೀಯ ಸಾಗರೋತ್ತರ ವ್ಯವ ಹಾರಗಳ ಸಚಿವಾಲಯದ ಕಾರ್ಯದರ್ಶಿ ಸೇರಿದಂತೆ ಎಲ್ಲರಿಗೂ ನೋಟಿಸ್ ಜಾರಿ ಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.