ಪೀಣ್ಯ ದಾಸರಹಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹಮದ್ ಅವರು ‘ಕರಿಯ’ ಎಂದು ಲೇವಡಿ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಹಾಗೂ ಒಕ್ಕಲಿಗ ಸಮುದಾಯಕ್ಕೆ ಅಪಮಾನ ಮಾಡಿದಂತಾಗಿದೆ. ಇದು ಸಂವಿಧಾನ ವಿರುದ್ಧದ ಹೇಳಿಕೆಯಾಗಿದೆ. ಅವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು’ ಎಂದು ಒಕ್ಕಲಿಗರ ಕ್ರಿಯಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗರ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ. ಕುಮಾರ್, ‘ಸಮಾಜವಾದಿ ಚಿಂತನೆಯುಳ್ಳ ಮುಖ್ಯಮಂತ್ರಿಯವರು, ಜಮೀರ್ ಅಹ್ಮದ್ ಅವರ ವರ್ಣಭೇದ ಹೇಳಿಕೆಯನ್ನು ಖಂಡಿಸಿ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಈ ಹೇಳಿಕೆ ಜನಾಂಗೀಯ ಸಂಘರ್ಷಕ್ಕೆ ನಾಂದಿಯಾಗುತ್ತದೆ’ ಎಂದು ಅವರು ಹೇಳಿದರು.
‘ಕ್ರಮ ಕೈಗೊಳ್ಳದಿದ್ದರೆ ಸರ್ಕಾರ ಮತ್ತು ಸಚಿವರ ವಿರುದ್ದ ನಮ್ಮ ಒಕ್ಕಲಿಗರ ಕ್ರಿಯಾ ಸಮಿತಿಯಿಂದ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ' ಎಂದು ಅವರು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.