ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇದೇ 16ರಂದು ಒಟ್ಟು ಆರು ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.
‘ಕೋವಿಡ್ ಲಸಿಕೆ ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಹಸ್ತಾಂತರವಾಗಿದೆ. ರಾಜ್ಯ ಸರ್ಕಾರದಿಂದ ಬಿಬಿಎಂಪಿಗೆ ಲಸಿಕೆಗಳನ್ನು ಬುಧವಾರ ಹಸ್ತಾಂತರಿಸಲಾಗುತ್ತದೆ. ಲಸಿಕೆ ನೀಡುವ ಮೊದಲ ಕಾರ್ಯಕ್ರಮ ಇದೇ 16ರಂದು ನಡೆಯಲಿದೆ. ಅಂದು ಕೇವಲ 6 ಲಸಿಕಾ ಕೇಂದ್ರಗಳಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುವುದು’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
‘ನಮಗೆ ಮೊದಲ ಕಂತಿನಲ್ಲಿ ಎಷ್ಟು ಲಸಿಕೆ ನೀಡಲಾಗುತ್ತದೆಯೋ ತಿಳಿಯದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,507 ಲಸಿಕಾ ಕೇಂದ್ರಗಳನ್ನು ಸಜ್ಜುಗೊಳಿಸಿದ್ದೇವೆ. ಲಸಿಕೆ ಪೂರೈಕೆಯಾದಂತೆಯೇ ಹಂತ ಹಂತವಾಗಿ ಅವುಗಳನ್ನು ನೀಡುವುದಕ್ಕೆ ಕ್ರಮಕೈಗೊಳ್ಳಲಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.