ADVERTISEMENT

'ನಾಡು - ನುಡಿ: ವಿರೋಧ ಪಕ್ಷದವರ ವಿಶ್ವಾಸ ಅಗತ್ಯ'

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2019, 5:11 IST
Last Updated 7 ಡಿಸೆಂಬರ್ 2019, 5:11 IST
   

ಬೆಂಗಳೂರು: ‘ಹಿಂದೆ ನಾಡು–ನುಡಿ ವಿಚಾರ ಬಂದಾಗ ಆಡಳಿತ ಪಕ್ಷದವರು ವಿರೋಧ ಪಕ್ಷದವರ ವಿಶ್ವಾಸ ಗಳಿಸಿ, ಮುಂದಿನ ಹೆಜ್ಜೆ ಇಡುತ್ತಿದ್ದರು. ಆದರೆ, ಬದಲಾದ ರಾಜಕೀಯ ವಾತಾವರಣದಲ್ಲಿ ಇದಾಗುತ್ತಿಲ್ಲ’ ಎಂದುಸ್ಕೌಟ್ಸ್ ಮತ್ತು ಗೈಡ್ಸ್‌ನ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ‘ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು. ಈ ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

‘ಸರ್ಕಾರ ನಡೆಸುವವರು ತಮಗೆ ಎಲ್ಲವೂ ತಿಳಿದಿದೆ ಎಂಬ ಧೋರಣೆ ತಾಳುವುದು ಸರಿಯಲ್ಲ. ಇದೀಗ ವಿರೋಧ ಪಕ್ಷವನ್ನು ಮೂಲೆಗುಂಪು ಮಾಡಲಾಗುತ್ತಿದೆ.ರಾಜಕೀಯದಲ್ಲಿ ಮಾನವೀಯ ಮೌಲ್ಯ ಹಾಗೂ ಸಾಹಿತ್ಯದ ಅಭಿರುಚಿ ಹೊಂದಿರುವವರನ್ನು ಕಾಣುವುದು ವಿರಳ’ ಎಂದರು.

ADVERTISEMENT

‘ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಆದರೆ, ಅದೃಷ್ಟ ಇರಲಿಲ್ಲ. ‍ಪ್ರಥಮ ಬಾರಿ ಸ್ಪರ್ಧಿಸಿದ ಸಂದರ್ಭದಲ್ಲಿ ಇಂದಿರಾ ಗಾಂಧಿ ಹತ್ಯೆಯಾಯಿತು. ಎರಡನೇ ಬಾರಿ ಸ್ಪರ್ಧಿಸಿದಾಗ ರಾಜೀವ್‌ ಗಾಂಧಿ ಕೊಲೆಯಾಯಿತು. ಅನುಕಂಪದ ಅಲೆ ನನ್ನ ವಿರುದ್ಧವಿತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.