ಬೆಂಗಳೂರು: ಅಂಗಾಂಗ ದಾನಿಗಳ ಕುಟುಂಬದ ಸದಸ್ಯರಿಗೆ ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಂಸಾ ಪತ್ರಗಳನ್ನು ನೀಡಿ ಗೌರವಿಸಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (ಸೊಟ್ಟೊ) ಅಡಿ ಅಂಗಾಂಗ ದಾನ ಮಾಡಿದವರ ಮಾಹಿತಿಯನ್ನು ಪಡೆಯಬೇಕು. ಅಂಗಾಂಗ ದಾನ ಮಾಡಿದ 10 ದಿನಗಳ ಒಳಗೆ ಅಂಗಾಂಗ ದಾನಿಯ ಕುಟುಂಬದವರಿಗೆ ರಾಜ್ಯ ಸರ್ಕಾರದ ಪರವಾಗಿ ಪ್ರಶಂಸಾ ಪತ್ರವನ್ನು ನೀಡಿ, ಗೌರವಿಸುವ ಬಗ್ಗೆ ಕ್ರಮವಹಿಸಬೇಕು. ಬಳಿಕ ಸಾರ್ವಜನಿಕ ಸಮಾರಂಭಗಳಾದ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವದಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಬೇಕು ಎಂದು ತಿಳಿಸಲಾಗಿದೆ.
2023ನೇ ಸಾಲಿನಿಂದ 2024ರ ಜುಲೈವರೆಗೆ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಮುಂಬರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪ್ರಶಂಸಾ ಪತ್ರ ನೀಡಿ, ಗೌರವಿಸಲು ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.