ADVERTISEMENT

Bengaluru Rains | ಬೆಂಗಳೂರಿನಲ್ಲಿ ಮಳೆಯ ಅಬ್ಬರ: ವಿಮಾನ ಸಂಚಾರ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 5:02 IST
Last Updated 22 ಅಕ್ಟೋಬರ್ 2024, 5:02 IST
<div class="paragraphs"><p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ</p></div>

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

   

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಹಲವು ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 20ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. 5 ವಿಮಾನಗಳ ಮಾರ್ಗ ಬದಲಾವಣೆ ಮಾಡಿ ಬೇರೆ ವಿಮಾನ ನಿಲ್ದಾಣಗಳಿಗೆ ಕಳಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ADVERTISEMENT

ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಏರ್ ಇಂಡಿಯಾ ಹಾಗೂ ದೆಹಲಿ, ಹೈದರಾಬಾದ್‌, ಚಂಡೀಗಢದಿಂದ ಬೆಂಗಳೂರಿಗೆ ಹೊರಟ್ಟಿದ್ದ ಮೂರು ಇಂಡಿಗೊ ವಿಮಾನಗಳನ್ನು ಚೆನ್ನೈಗೆ ತಿರುಗಿಸಲಾಯಿತು. ಜತೆಗೆ, ಥಾಯ್ಲೆಂಡ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಥಾಯ್ ಲಯನ್ ಏರ್ ವಿಮಾನವನ್ನೂ ಚೆನ್ನೈಗೆ ಮಾರ್ಗ ಬದಲಾಯಿಸಲಾಗಿದೆ.

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರು ಉತ್ತರ ಭಾಗದಲ್ಲಿರುವ ಸಹಕಾರನಗರ ಮತ್ತು ಯಲಹಂಕದಲ್ಲಿ ಕ್ರಮವಾಗಿ 154.4 ಮಿ.ಮೀ. ಮತ್ತು 110 ಮಿ.ಮೀ. ಮಳೆಯಾಗಿದೆ. ದೇವನಹಳ್ಳಿ ಮತ್ತು ಕೋರಮಂಗಲ (ತಲಾ 88.2 ಮಿ.ಮೀ), ಎಚ್‌ಎಸ್‌ಆರ್ ಲೇಔಟ್ (81.6 ಮಿ.ಮೀ), ಮತ್ತು ಬಿಇಎಲ್ ರಸ್ತೆ (70.4 ಮಿ.ಮೀ) ಮಳೆಯಾಗಿದೆ ಎಂದು ವರದಿಯಾಗಿದೆ.

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 42.3 ಮಿ.ಮೀ ಮಳೆಯಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) 105 ಮಿ.ಮೀ ಮತ್ತು ಜಿಕೆವಿಕೆಯಲ್ಲಿ 21.2 ಮಿ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.