ADVERTISEMENT

ಅಪಾರ್ಟ್‌ಮೆಂಟ್‌ ನಿವಾಸಿಗಳ ಸಂಘಕ್ಕೇ ಮಾಲೀಕತ್ವ; ಕಾನೂನು: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 23:36 IST
Last Updated 13 ಫೆಬ್ರುವರಿ 2024, 23:36 IST
<div class="paragraphs"><p>ಡಿ.ಕೆ.ಶಿವಕುಮಾರ್‌&nbsp;&nbsp;</p></div>

ಡಿ.ಕೆ.ಶಿವಕುಮಾರ್‌  

   

ಬೆಂಗಳೂರು: ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿವಾಸಿಗಳ ಅಸೋಸಿಯೇಷನ್‌ನವರೇ ಆ ಜಾಗದ ಮಾಲೀಕರಾಗುವಂತೆ ಕಾನೂನು ರೂಪಿಸುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದರು.

ಬಿಜೆಪಿಯ ರವಿಸುಬ್ರಹ್ಮಣ್ಯ ಅವರ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿ, ಅಪಾರ್ಟ್‌ಮೆಂಟ್‌ ನಿರ್ಮಾಣದ ಜಾಗ ಜಮೀನಿನ ಮಾಲೀಕನ ಹೆಸರಿನಲ್ಲೇ ಇರುವುದರಿಂದ ಅನೇಕರು ಆ ಜಾಗದ ಮೇಲೆ ಸಾಲ ಪಡೆಯುತ್ತಿದ್ದಾರೆ. ಮುಂದೆ ಆ ಕಟ್ಟಡದ ಆಯಸ್ಸು ಮುಗಿದ ಮೇಲೆ, ಅಲ್ಲಿ ಮರು ನಿರ್ಮಾಣದ ವೇಳೆ ಅಲ್ಲಿ ವಾಸವಿರುವ ನಿವಾಸಿಗಳಿಗೆ ಯಾವುದೇ ಹಕ್ಕಿರುವುದಿಲ್ಲ. ಇದಕ್ಕಾಗಿ ಪ್ರತ್ಯೇಕ ಕಾನೂನು ತರಬೇಕು ಎಂದು ಹೇಳಿದರು.

ADVERTISEMENT

ಇದಕ್ಕೆ ಉತ್ತರಿಸಿದ ಶಿವಕುಮಾರ್‌, ಅಕ್ರಮವಾಗಿ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸುತ್ತಿರುವವರಿಂದ ಸಮಸ್ಯೆ ಆಗುತ್ತಿದೆ ಎಂದರು.

‘ಬಹುತೇಕ ಡೆವಲಪರ್‌ಗಳು ಆ ರೀತಿ ಮಾಡಲು ಹೋಗುವುದಿಲ್ಲ. ನನ್ನದೇ ಸಂಸ್ಥೆಗಳಲ್ಲಿ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣದ ನಂತರ ಜಮೀನಿನ ದಾಖಲೆಗಳನ್ನು ಅಲ್ಲಿನ ನಿವಾಸಿಗಳ ಅಸೋಸಿಯೇಷನ್‌ಗೆ ಹಸ್ತಾಂತರ ಮಾಡುತ್ತಾರೆ. ಅಕ್ರಮವಾಗಿ ನಿರ್ಮಾಣ ಮಾಡುವವರು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. 2016 ರ ನಂತರ ರೇರಾ ಬಂದಿದೆ. ಬೆಂಗಳೂರಿನಲ್ಲಿ ನಾವು ಆಸ್ತಿಗಳ ಸಮೀಕ್ಷೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.