ಬೆಂಗಳೂರು: ‘ಕಂದಾಯ ಅದಾಲತ್‌ಗಳನ್ನು ನಡೆಸಿ ಪಹಣಿಗಳಲ್ಲಿರುವ ಲೋಪದೋಷ ತಿದ್ದುಪಡಿ ಮಾಡುವ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರ್‌ಗೆ ನೀಡಿದ್ದ ಅವಧಿಯನ್ನು 2023ರ ಡಿ.31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ಕಾರ್ಯವನ್ನು ತ್ವರಿತಗೊಳಿಸುವ ಉದ್ದೇಶದಿಂದ, ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್‌ಗೆ ನೀಡಿದ್ದ ಅವಧಿ 2022ರ ಡಿ. 31ಕ್ಕೆ ಕೊನೆಗೊಂಡಿತ್ತು. ಇದೀಗ ಮತ್ತೆ ಒಂದು ವರ್ಷ ಅವಧಿಗೆ ವಿಸ್ತರಿಸಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಈ ಮೂರು ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಉಳಿದ ಕಡೆಗಳಲ್ಲಿ ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಮಟ್ಟದಲ್ಲಿ ಕಂದಾಯ ಅದಾಲತ್ ನಡೆಸಿ ಪಹಣಿಗಳಲ್ಲಿ ಲೋಪದೋಷಗಳನ್ನು ಸರಿಪಡಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಇಂಥ ಲೋಪಗಳನ್ನು ಸರಿಪಡಿಸಲಾಗಿದ್ದು, ಅರ್ಜಿಗಳು ಇನ್ನೂ ಬಾಕಿ ಇವೆ. ಅರ್ಜಿಗಳನ್ನು ಶೀಘ್ರ ವಿಲೇಮಾಡುವ ಉದ್ದೇಶದಿಂದ ಅವಧಿ ವಿಸ್ತರಿಸಲಾಗಿದೆ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.