ADVERTISEMENT

ಪಂಚಮಸಾಲಿ ಪ್ರತಿಭಟನೆ: ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 21:30 IST
Last Updated 19 ಫೆಬ್ರುವರಿ 2023, 21:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಸ್ಥಳದಲ್ಲಿ ಶಿವ ಬಂಡಿ (31) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತ್ಯೇಕ ಪೆಂಡಾಲ್‌ನಲ್ಲಿ ಕುಳಿತಿರುವ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡು ವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾರೆ.

ಫೆ.17ರಂದು ಸಂಜೆ 5.30 ಗಂಟೆ ಸುಮಾರಿಗೆ ಪ್ರತಿಭಟನೆ ಉದ್ದೇಶಿಸಿ ಸ್ವಾಮೀಜಿ ಮಾತನಾಡುತ್ತಿದ್ದರು. ಪೆಟ್ರೋಲ್ ಬಾಟಲಿ ಸಮೇತ ಹಾಜರಿದ್ದ ಶಿವ ಬಂಡಿ, ‘ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ. ನ್ಯಾಯ ಬೇಕು. ಸಮಾಜಕ್ಕೋಸ್ಕರ ಪ್ರಾಣ ನೀಡುತ್ತೇನೆ’ ಎಂದು ಕೂಗಾಡಿದ್ದರು. ನಂತರ, ಏಕಾಏಕಿ ಮೈಗೆ ಪೆಟ್ರೋಲ್ ಸುರಿದುಕೊಂಡಿದ್ದರು. ರಕ್ಷಣೆಗೆ ಹೋಗಿದ್ದ ಪೊಲೀಸರು ಶಿವ ಬಂಡಿಯನ್ನು ವಶಕ್ಕೆ ಪಡೆದರು.

ADVERTISEMENT

ಜಾಮೀನು ಮೇಲೆ ಬಿಡುಗಡೆ: ‘ಕೊಪ್ಪಳ ಜಿಲ್ಲೆ ಕುಷ್ಟಗಿಯ ಶಿವಬಂಡಿ, ಹೋಟೆಲ್‌ ಇಟ್ಟುಕೊಂಡಿದ್ದಾರೆ. 2 ಲೀಟರ್ ಪೆಟ್ರೋಲ್‌ ತಂದಿದ್ದು, ಬೆಂಕಿ ಹಚ್ಚಿಕೊಳ್ಳಲು
ಯತ್ನಿಸಿದ್ದರು

ಆತ್ಮಹತ್ಯೆಗೆ ಯತ್ನ ಆರೋಪದಡಿ ಶಿವಬಂಡಿ ಅವರನ್ನು ಬಂಧಿಸಿ, ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.