ADVERTISEMENT

‘ಪರಿಶ್ರಮ’ ವಿದ್ಯಾರ್ಥಿಗಳ ಸನ್ಮಾನ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 16:19 IST
Last Updated 22 ಜೂನ್ 2024, 16:19 IST
<div class="paragraphs"><p>‘ಪರಿಶ್ರಮ’ ನೀಟ್ ಅಕಾಡೆಮಿಯಲ್ಲಿ ಕಲಿತು ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.&nbsp;</p></div>

‘ಪರಿಶ್ರಮ’ ನೀಟ್ ಅಕಾಡೆಮಿಯಲ್ಲಿ ಕಲಿತು ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. 

   

ಬೆಂಗಳೂರು: ‘ಪರಿಶ್ರಮ’ ನೀಟ್ ಅಕಾಡೆಮಿಯಲ್ಲಿ ಕಲಿತು ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಶನಿವಾರ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿತ್ತು. 

‘ಅವಕಾಶ ನಮ್ಮನ್ನು ಹುಡುಕಿಕೊಂಡು ಬರುವುದಿಲ್ಲ. ನೀವೇ ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕು ಎಂದು ಇಂದಿರಾ ಗಾಂಧಿ ಹೇಳಿದ್ದರು. ಪರಿಶ್ರಮ ಸಂಸ್ಥೆ ನಿಮಗೆ ದಾರಿ ದೀಪವಾಗಿ ಹೊಸ ಬೆಳಕು ನೀಡಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌  ಹೇಳಿದರು.

ADVERTISEMENT

‘ಪರಿಶ್ರಮ ಸಂಸ್ಥೆಯವರು ಇಲ್ಲಿನ ಮಕ್ಕಳನ್ನು ಯಾವ ರೀತಿ ತಯಾರು ಮಾಡಿದ್ದಾರೆ ಎಂದರೆ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ 250 ಸೀಟುಗಳಿದ್ದರೆ ಅದರಲ್ಲಿ 150ರಿಂದ 180 ಮಕ್ಕಳು ಇಲ್ಲಿ ಶಿಕ್ಷಣ ಪಡೆದವರೇ ಇದ್ದಾರೆ. ಇದಕ್ಕಿಂತ ದೊಡ್ಡ ಸಾಧನೆ, ಬದಲಾವಣೆ ಯಾರೂ ಮಾಡಲು ಸಾಧ್ಯವಿಲ್ಲ’ ಎಂದರು.

ಸಚಿವರಾದ ಎಂ.ಸಿ. ಸುಧಾಕರ್, ಮಧು ಬಂಗಾರಪ್ಪ, ಪರಿಶ್ರಮ ನೀಟ್ ಅಕಾಡೆಮಿ ಮುಖ್ಯಸ್ಥ, ಶಾಸಕ ಪ್ರದೀಪ್ ಈಶ್ವರ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಲಕ್ಷ್ಮಣ್ ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.