ಬೆಂಗಳೂರು: ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ–ಜೆಡಿಎಸ್ ಮೈತ್ರಿಕೂಟಗಳು ಈ ಉಪ ಚುನಾವಣೆಯನ್ನು ಸವಾಲಾಗಿ ಪರಿಗಣಿಸಿದ್ದವು. ಮೂರೂ ಪಕ್ಷಗಳ ಪ್ರಮುಖ ನಾಯಕರು ಹಲವು ದಿನಗಳಿಂದ ಚುನಾವಣಾ ಕಣದಲ್ಲೇ ಬೀಡುಬಿಟ್ಟು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಬೆವರು ಹರಿಸಿದ್ದರು.
ಬುಧವಾರ ನಡೆದ ಮತದಾನದಲ್ಲಿ ಚನ್ನಪಟ್ಟಣದಲ್ಲಿ 2.06 ಲಕ್ಷ, ಶಿಗ್ಗಾವಿಯಲ್ಲಿ 1.91 ಲಕ್ಷ ಮತ್ತು ಸಂಡೂರಿನಲ್ಲಿ 1.80 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.