ADVERTISEMENT

ಬೆಂಗಳೂರು | ಕದ್ದ ಮೊಬೈಲ್ ಮಾರಾಟ: ಸಿಕ್ಕಿಬಿದ್ದ ಆರೋಪಿ

​ಪ್ರಜಾವಾಣಿ ವಾರ್ತೆ
Published 31 ಮೇ 2024, 16:30 IST
Last Updated 31 ಮೇ 2024, 16:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ನಗರದ ಹಲವೆಡೆ ಮೊಬೈಲ್‌ಗಳನ್ನು ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಸಾಗರ್ (21) ಎಂಬುವವರನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನೇಪಾಳದ ಸಾಗರ್, ಮಹದೇವಪುರದಲ್ಲಿ ನೆಲೆಸಿದ್ದ. ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ ಮಾಹಿತಿ ಇದೆ. ಈತನಿಂದ ₹ 2 ಲಕ್ಷ ಮೌಲ್ಯದ 18 ಮೊಬೈಲ್‌ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಕಗ್ಗದಾಸನಪುರ ಬಾಲಾಜಿ ಬಡಾವಣೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರ ಮೊಬೈಲ್ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ’ ಎಂದು ತಿಳಿಸಿದರು.

‘ಕಿಟಕಿ ತೆರೆದಿರುತ್ತಿದ್ದ ಮನೆಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಜನರ ಮೊಬೈಲ್‌ಗಳನ್ನು ಆರೋಪಿ ಕಳ್ಳತನ ಮಾಡುತ್ತಿದ್ದ. ಕದ್ದ ಮೊಬೈಲ್‌ಗಳನ್ನು ಬೆನ್ನಿಗಾನಹಳ್ಳಿಯಲ್ಲಿ ರಸ್ತೆ ಮೇಲೆ ನಿಂತು ಮಾರಾಟ ಮಾಡುತ್ತಿದ್ದ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.