ADVERTISEMENT

ಪಿಇಎಸ್‌ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಜ. 3ರಿಂದ

​ಪ್ರಜಾವಾಣಿ ವಾರ್ತೆ
Published 1 ಜನವರಿ 2024, 16:23 IST
Last Updated 1 ಜನವರಿ 2024, 16:23 IST
<div class="paragraphs"><p> ಕಲಾವಿದರು ನೃತ್ಯ ರೂಪಕ ಪ್ರದರ್ಶನ( ಸಂಗ್ರಹ ಚಿತ್ರ)</p></div>

ಕಲಾವಿದರು ನೃತ್ಯ ರೂಪಕ ಪ್ರದರ್ಶನ( ಸಂಗ್ರಹ ಚಿತ್ರ)

   

ಬೆಂಗಳೂರು: ಪೀಪಲ್ಸ್‌ ಎಜುಕೇಷನ್‌ ಸೊಸೈಟಿ (ಪಿಇಎಸ್‌) ವಿಶ್ವವಿದ್ಯಾಲಯ ಸ್ಥಾಪನೆಯಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಇದೇ 3 ರಿಂದ 6ರವರೆಗೆ ಸುವರ್ಣ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಪಿಇಎಸ್‌ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಜವಹರ್‌ ದೊರಸ್ವಾಮಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ಜ. 3ರಂದು ಸುವರ್ಣ ಮಹೋತ್ಸವಕ್ಕೆ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್. ದೊರೆಸ್ವಾಮಿ ಚಾಲನೆ ನೀಡಲಿದ್ದಾರೆ. ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಆನಂದ ರುಘುನಾಥನ್, ಇನ್‌ಮೂಬಿ ಸಂಸ್ಥೆಯ ಸಂಸ್ಥಾಪಕ ನವೀನ್ ತಿವಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

’ಜ.4ರಂದು ನಡೆಯುವ ಕಾರ್ಯಕ್ರಮದಲ್ಲಿ ’ತುಘಲಕ್‌’ –ತಮಿಳು ವಾರಪತ್ರಿಕೆಯ ಸಂಪಾದಕ ಸ್ವಾಮಿನಾಥನ್ ಗುರುಮೂರ್ತಿ,  ಸಿಸ್ಕೂ ಫಾರ್ ಸ್ಟಾರ್ಟ್‌ಅಪ್‌ನ ಮುಖ್ಯಸ್ಥೆ ಶೃತಿ ಕಣ್ಣನ್ ಭಾಗವಹಿಸಲಿದ್ದಾರೆ. ಜ. 5ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆರ್ಥಿಕ ಸಲಹಾ ಸಮಿತಿಯ ಸದಸ್ಯ ಸಂಜೀವ್ ಸನ್ಯಾಲ್ ಭಾಗವಹಿಸಲಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಸಂಸದ ತೇಜಸ್ವಿ ಸೂರ್ಯ ಅವರು ಸಂವಾದ ನಡೆಸಲಿದ್ದಾರೆ‘ ಎಂದು ವಿವರಿಸಿದರು.

’ಜ. 6ರ ಕಾರ್ಯಕ್ರಮದಲ್ಲಿ ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರೊಂದಿಗೆ  ಇಂಕ್‌(ಐಎನ್‌ಕೆ) ಸಂಸ್ಥಾಪಕಿ ಲಕ್ಷ್ಮಿ ಪ್ರಾತುರಿ ಅವರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರತಿದಿನ ಸಂಜೆ 7.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ‘ ಎಂದು ತಿಳಿಸಿದರು.

‘1972ರ ಅ.11ರಂದು ಪ್ರೊ. ಎಂ.ಆರ್. ದೊರೆಸ್ವಾಮಿಯವರು ಬೆಂಗಳೂರಿನ ಹನುಮಂತನಗರದ ಬಾಡಿಗೆ ವ್ಯಾಯಾಮ ಶಾಲೆಯಲ್ಲಿ 40 ವಿದ್ಯಾರ್ಥಿಗಳೊಂದಿಗೆ ಆರಂಭಿಸಿದ ಪಿಇಎಸ್‌ ಪದವಿ ಪೂರ್ವಕಾಲೇಜು, ಇಂದು ಪಿಇಎಸ್‌ ವಿಶ್ವವಿದ್ಯಾಲಯವಾಗಿ ಶೈಕ್ಷಣಿಕ ರಂಗದಲ್ಲಿ ಉತ್ತಮ ಹೆಸರುಗಳಿಸಿದೆ. ಸದ್ಯ ಪಿಇಎಸ್‌ ಶಿಕ್ಷಣ ಸಂಸ್ಥೆಯಲ್ಲಿ 25 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಎರಡೂವರೆ ಸಾವಿರ ಅಧ್ಯಾಪಕರು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಜವಹರ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.