ADVERTISEMENT

ಪೆಟ್ರೋಲ್‌ ಬೆಲೆ ಏರಿಕೆ ಸಣ್ಣ ವಿಷಯ | ಬಿಜೆಪಿಯಿಂದ ಸುಮ್ಮನೆ ಪ್ರತಿಭಟನೆ: ಸುರೇಶ್‌

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 11:49 IST
Last Updated 19 ಜೂನ್ 2024, 11:49 IST

15 ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲವೂ ಗೊತ್ತಿದೆ. ಬಿಜೆಪಿ ಮುಖಂಡರನ್ನು ಕೇಳಿ ಬೆಲೆ ಏರಿಕೆ ಅಥವಾ ಇಳಿಕೆ ಮಾಡುವ ಅವಶ್ಯಕತೆ ಇಲ್ಲ' ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ ಹೇಳಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಸಣ್ಣ ವಿಷಯ. ಬಿಜೆಪಿಯವರಿಗೆ ಬೇರೆ ಏನೂ ಕೆಲಸ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದಾರೆ' ಎಂದರು. 'ಸುತ್ತಮುತ್ತಲ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ ಆಸೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಏನು ಮಾಡುತ್ತಿದ್ದರು' ಎಂದು ಪ್ರಶ್ನಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.