ADVERTISEMENT

ಪಿಜಿಸಿಇಟಿ: ಶುಲ್ಕ ಪಾವತಿಗೆ 24 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:34 IST
Last Updated 22 ಜೂನ್ 2024, 15:34 IST

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ‌ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಮತ್ತು ಪರೀಕ್ಷಾ ಕೇಂದ್ರಗಳನ್ನು ನಮೂದಿಸಲು, ಮಾಹಿತಿ ತಿದ್ದುಪಡಿಗೆ ಜೂನ್ 24ರ ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

‘ಈ ಪ್ರಕ್ರಿಯೆಗಳನ್ನು ನಿರ್ವಹಿಸಲು ಪೋರ್ಟಲ್ ತೆರೆಯಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT