ADVERTISEMENT

ಪಂಡಿತಾರಾಧ್ಯ ಸ್ವಾಮೀಜಿ ಸೇರಿ ಮೂವರಿಗೆ ‘ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 15:52 IST
Last Updated 26 ಜೂನ್ 2024, 15:52 IST
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ   

ಬೆಂಗಳೂರು: ಡಾ.ಫ.ಗು.ಹಳಕಟ್ಟಿ ಫೌಂಡೇಷನ್ ನೀಡುವ ‘ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ’ಗೆ ಸಾಹಿತ್ಯ ಕ್ಷೇತ್ರದಿಂದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶಿಕ್ಷಣ ಕ್ಷೇತ್ರದಿಂದ ಪ್ರಭಾಕರ ಕೋರೆ ಹಾಗೂ ಸಮಾಜ ಸೇವೆ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ತಲಾ ₹ 1 ಲಕ್ಷ ನಗದು ಒಳಗೊಂಡಿದೆ. ವಚನ ಪಿತಾಮಹ ಫ.ಗು. ಹಳಕಟ್ಟಿ ಅವರ ಸ್ಮರಣಾರ್ಥ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಸಾಹಿತ್ಯ, ಶೈಕ್ಷಣಿಕ ಮತ್ತು ಸಮಾಜಸೇವೆ ಕ್ಷೇತ್ರದಲ್ಲಿ ಸಾಧನೆ ಮಾಡಿದರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. 

ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜುಲೈ 2ರಂದು ಸಂಜೆ 5.30ಕ್ಕೆ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಪ್ರಕಟಣೆ ತಿಳಿಸಿದೆ. 

ADVERTISEMENT
ಪ್ರಭಾಕರ ಕೋರೆ

ತೇಜಸ್ವಿನಿ ಅನಂತಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.