ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗ ಮತ್ತು ಸಂಯೋಜಿತ ಸಂಶೋಧನಾ ಕೇಂದ್ರಗಳಲ್ಲಿ ಪಿಎಚ್.ಡಿ(ಸಂಶೋಧನೆ) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರವೇಶಕ್ಕಾಗಿ ಅಗತ್ಯವಾದ ವಿದ್ಯಾರ್ಹತೆ, ಪ್ರವೇಶ ಪರೀಕ್ಷೆಯ ವಿವರಗಳು, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ಹೊಂದುವ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತಿತರ ವಿವರಗಳನ್ನು ವಿಶ್ವವಿದ್ಯಾಲಯದ ಜಾಲತಾಣ www.bcu.ac.in ದಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.20 ಕೊನೆದಿನ.
ಪ್ರವೇಶ ಪರೀಕ್ಷೆಯ ದಿನಾಂಕವನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.