ADVERTISEMENT

ಜಲಮಂಡಳಿ ಅಧ್ಯಕ್ಷರ ಫೋನ್-ಇನ್ ನಾಳೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 15:39 IST
Last Updated 10 ಜುಲೈ 2024, 15:39 IST
ವಿ. ರಾಮ್‌ಪ್ರಸಾತ್ ಮನೋಹರ್
ವಿ. ರಾಮ್‌ಪ್ರಸಾತ್ ಮನೋಹರ್   

ಬೆಂಗಳೂರು: ಜಲಮಂಡಳಿಯ ಅಧ್ಯಕ್ಷ ವಿ.ರಾಮ್‌ಪ್ರಸಾತ್‌ ಮನೋಹರ್‌ ಅವರು ಜುಲೈ 12ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. 

ಸಾರ್ವಜನಿಕರು ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್‌ನ ಸಮಸ್ಯೆಯ ಬಗ್ಗೆ ಮಾತನಾಡಿ ಬಗೆಹರಿಸಿಕೊಳ್ಳಬಹುದು.

ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ದೂರವಾಣಿ 080-22945119 ಮತ್ತು 080-22229639

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.